ಕಾರ್ಕಳ : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಫೆ. 27ರಂದು ಮಂಗಳೂರು ವಾರ್ತಾ ಇಲಾಖೆ ಕಚೇರಿಯಲ್ಲಿ ನಡೆಯಲಿದೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಂಕಣಕಾರ, ಅನುಭವಿ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಹಾಗೂ ಹಿರಿಯ ಪತ್ರಕತ್ರ ಇಬ್ರಾಹಿಂ ಅಡ್ಕಸ್ಥಳ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅಧ್ಯಕ್ಷರಾಗಿ ಶ್ರೀನಿವಾಸ್ ಇಂದಾಜೆ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಆಯ್ಕೆಯಾಗಿರುತ್ತಾರೆ.
Recent Comments
ಕಗ್ಗದ ಸಂದೇಶ
on