Tuesday, July 5, 2022
spot_img
Homeಸುದ್ದಿದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಿತೇಂದ್ರ ಕುಂದೇಶ್ವರ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಿತೇಂದ್ರ ಕುಂದೇಶ್ವರ

ಕಾರ್ಕಳ : ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಾರ್ತಾ ಭಾರತಿಯ ಇಬ್ರಾಹಿಂ ಅಡ್ಕಸ್ಥಳ ಮತ್ತು ವಿಶ್ವವಾಣಿ ಬ್ಯೂರೋ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ನಡುವೆ ನೇರ ಹಣಾಹಣಿ ನಡೆದಿದ್ದು, ಕುಂದೇಶ್ವರ ೧೬೪ ಮತಗಳನ್ನು ಪಡೆದರೆ, ಇಬ್ರಾಹಿಂ ೧೩೮ ಮತ ಪಡೆದರು.
ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ನಾಯಕ್‌ ಇಂದಾಜೆ, ಕೋಶಾಧಿಕಾರಿಯಾಗಿ ಪುಷ್ಪರಾಜ್‌ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಅವಿರೋಧವಾಗಿ ಆಯ್ಕೆಯಾಗಿದ್ದರು.
ಜಿತೇಂದ್ರ ಕುಂದೇಶ್ವರ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಿರ್ಗಾನ ಕುಂದೇಶ್ವರ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಗಳು, ಯಕ್ಷಕೂಟದ ಪ್ರಧಾನ ಸಲಹೆಗಾರರು ಆಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಿವಿಧ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ಮಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಫೆ. 27ರಂದು ನಡೆದಿತ್ತು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!