ಹೆಬ್ರಿ : ಹಿಂದೂ ಜಾಗರಣ ವೇದಿಕೆ ಹೆಬ್ರಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕೆಎಂಸಿ ಮಣಿಪಾಲ ರಕ್ತನಿಧಿ ವಿಭಾಗದ ಆಶ್ರಯದಲ್ಲಿ ಫೆ. ೨೬ರಂದು ಹೆಬ್ರಿಯ ಶ್ರೀರಾಮಮಂದಿರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಉದ್ಯಮಿ ಬೆಳ್ವೆ ಗಣೇಶ್ ಕಿಣಿ ಶಿಬಿರಕ್ಕೆ ಚಾಲನೆ ನೀಡಿದರು ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲದ ವೈದ್ಯರು, ಹಿಂದೂ ಜಾಗರಣ ವೇದಿಕೆಯ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರು ಈ ಸಂದರ್ಭ ಉಪಸ್ಥಿತರಿದ್ದರು. ಶಿಬಿರದಲ್ಲಿ 125 ಯೂನಿಟ್ ರಕ್ತ ಸಂಗ್ರಹವಾಗಿದೆ.
ಹೆಬ್ರಿ : ಹಿಂದೂ ಜಾಗರಣೆ ವೇದಿಕೆ ಆಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
Recent Comments
ಕಗ್ಗದ ಸಂದೇಶ
on