ಕಾರ್ಕಳ : ಕುಕ್ಕುಂದೂರು ಗ್ರಾಮದ ಗುಂಡ್ಯಡ್ಕ ಬಳಿ ಕುಪ್ಪೇಬೆಟ್ಟು ನೀಲಮ್ಮ (85) ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಮಾ. 1ರಂದು ಸಂಭವಿಸಿದೆ. ಮಾಹಿತಿ ತಿಳಿದ ತಕ್ಷಣವೇ ದೌಡಾಯಿಸಿದ ಕಾರ್ಕಳ ಅಗ್ನಿಶಾಮಕ ದಳ ಸಿಬ್ಬಂದಿ ಬಾವಿಗೆ ಬಿದ್ದ ನೀಲಮ್ಮ ಅವರನ್ನು ಮೇಲಕ್ಕೆತ್ತಿ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ. ಸಂಜೀವ್, ಚಂದ್ರಶೇಖರ್, ರೂಪೇಶ್, ನಿತ್ಯಾನಂದ, ಶಿವಯ್ಯ, ಅನಿಲ್ ಥಾಮಸ್, ಚಿತ್ರೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

