ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಆತ್ಮಕಥನ “ನನ್ನ ಬೊಗಸೆಯ ಆಕಾಶ” ಪುಸ್ತಕ ಬಿಡುಗಡೆ ಸಮಾರಂಭ ಮಾ. 12 ರ ಸಂಜೆ 4 ಗಂಟೆಗೆ ಬೆಂಗಳೂರು ಜೆ.ಸಿ. ರಸ್ತೆಯ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ. ನಿಟ್ಟೆ ಮೀನಾಕ್ಷಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗೌರವ ಸಲಹೆಗಾರ ಪ್ರೊ. ಎನ್. ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಮಾಜಿ ಕೇಂದ್ರ ಮಂತ್ರಿ ಡಾ. ಕೆ. ರೆಹೆಮಾನ್ ಖಾನ್, ನಿವೃತ್ತ ಆಂಗ್ಲ ಪ್ರಾಧ್ಯಾಪಕ ಪ್ರೊ. ಸಿ.ಎಸ್. ರಾಮಚಂದ್ರನ್, ಶಿಕ್ಷಣ ತಜ್ಞ ಹಾಗೂ ಲೇಖಕ ಪ್ರೊ. ಕೆ. ಈ. ರಾಧಾಕೃಷ್ಣ, ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಉಪಸ್ಥಿತರಿರುವರು.
Recent Comments
ಕಗ್ಗದ ಸಂದೇಶ
on