ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಮಾ. 4ರಂದು ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದು ಬಜೆಟ್ ನತ್ತ ಎಲ್ಲರ ಕುತೂಹಲ ನೆಟ್ಟಿದೆ.
ಬಜೆಟ್ ಮೊತ್ತ 2.50 ಲಕ್ಷ ಕೋಟಿ ರೂ. ದಾಟಲಿದ್ದು, ಜನಹಿತವಾದಂತಹ ಘೋಷಣೆಯನ್ನು ನಿರೀಕ್ಷಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕೈಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಅಹಾರ ಮತ್ತು ನಾಗರಿಕ ಪೂರೈಕೆ, ಇಂಧನ, ಕೃಷಿ, ತೋಟಗಾರಿಕೆ, ಕಂದಾಯ, ಗ್ರಾಮೀಣಾಭೀವೃದ್ದಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ ಇಲಾಖೆಗಳಿಂದ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇದ್ದು, ಕಳೆದೆರಡು ವರ್ಷಗಳ ಬಜೆಟ್ ನಲ್ಲಿ ಹೆಚ್ಚಿನ ಮೊತ್ತವನ್ನು ಕೋವಿಡ್ ಸೋಂಕು ತಡೆಗಟ್ಟುವುದಕ್ಕಾಗಿ ಮೀಸಲಿಡಲಾಗಿತ್ತು. ಆದ್ದರಿಂದ ಈ ಬಾರಿ ವಿವಿಧ ಇಲಾಖೆಗಳ ಬೇಡಿಕೆಯನ್ನು ಈಡೇರಿಸಲು ನಿರ್ಧರಿಸಿದ್ದು, ಆಡಳಿತಾರೂಢ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ದೊಡ್ಡ ಮಟ್ಟದ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದು ಇದೆಲ್ಲವನ್ನೂ ಬೊಮ್ಮಾಯಿ ಸರಿದೂಗಿಸಬೇಕಿದೆ.
ಪ್ರಸ್ತುತ ರಾಜ್ಯಸರ್ಕಾರ 2021-22 ನೇ ಸಾಲಿನಲ್ಲಿ 71,332 ಕೋಟಿ ರೂ. ಸಾಲ ಪಡೆಯಲಾಗಿದ್ದು, ಮಾರ್ಚ್ ಅಂತ್ಯಕ್ಕೆ ಒಟ್ಟು 4,57,899 ಕೋಟಿ ರೂ. ಸಾಲವಿದ್ದು, ಇದು 2022-23 ನೇ ಸಾಲಿಗೆ 5 ಲಕ್ಷ ಕೋಟಿ ರೂ. ದಾಟಲಿದೆ.
ಮಾ. 4 : ಬೊಮ್ಮಾಯಿ ಸರ್ಕಾರದ ಮೊದಲ ಬಜೆಟ್ ಮಂಡನೆ
Recent Comments
ಕಗ್ಗದ ಸಂದೇಶ
on