ಬೆಂಗಳೂರು : ಮಹಾಮಾರಿ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಮಾ. 4 ರಂದು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮೇಲೆ ಸಹಜವಾಗಿಯೇ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ. ಮಧ್ಯಾಹ್ನ 12.30ಕ್ಕೆ ಸಿಎಂ ಬೊಮ್ಮಾಯಿಯವರು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯವರೆಗೂ ಅಧಿಕಾರಿಗಳೊಂದಿಗೆ ಕೊನೆಯ ಕ್ಷಣದ ಕಸರತ್ತು ನಡೆಸಿದರು. ಜನಪರ ಬಜೆಟ್ ನೀಡಲು ಮುಂದಾಗಿರುವ ಸಿಎಂ 2023 ರ ಚುನಾವಣೆಯ ದೃಷ್ಟಿಯಿಂದಲೂ ಈ ಬಜೆಟ್ ಕುತೂಹಲ ಮೂಡಿಸಲಿದೆ.
2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ : ಸಿಎಂ ಬೊಮ್ಮಾಯಿ ಮೊದಲ ಬಜೆಟ್ ಮೇಲೆ ಭಾರಿ ನಿರೀಕ್ಷೆ
Recent Comments
ಕಗ್ಗದ ಸಂದೇಶ
on