ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅಭಿನಂದಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾ.೪ರಂದು ಮಂಡಿಸಿದ ಬಜೆಟ್ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಅವರು, ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂ. ಅನುದಾನ ಘೋಷಿಸಿರುವುದು ಸ್ವಾಗತಾರ್ಹ ಎಂದು ಹೇಳಿದ್ದಾರೆ. ನೀರಿನ ವಿಚಾರದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ. ಇದು ನಮ್ಮೆಲ್ಲರ ಗೆಲುವು, ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ. ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಅಂತೆಯೇ ಕಳೆದ ಸಾಲಿನ ಬಜೆಟ್ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ 7,795 ಕೋಟಿ ರೂ. ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ ಸ್ವಾಗತಾರ್ಹ : ಡಿಕೆಶಿ
Recent Comments
ಕಗ್ಗದ ಸಂದೇಶ
on