ಬೆಂಗಳೂರು : ʼಕರ್ನಾಟಕದ ವಿಧಾನ ಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಕಾಯ್ದೆ ತಿದ್ದಿಪಡಿʼ ಮಸೂದೆಯಡಿ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು, ಸಭಾಪತಿ, ಉಪ ಸಭಾಪತಿ, ವಿರೋಧ ಪಕ್ಷದ ನಾಯಕರು, ಸರಕಾರಿ ಮುಖ್ಯ ಸಚೇತಕರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರ ವೇತನ ಮತ್ತು ಭತ್ಯೆ ಹೆಚ್ಚಳಕ್ಕೆ ಅವಕಾಶ ಕಲ್ಪಿಸುವಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಸಮ್ಮತಿ ನೀಡಿದ್ದಾರೆ.
ವಿಧಾನ ಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಗದ್ದಲದ ಮದ್ಯೆಯೂ ಯಾವುದೇ ಚರ್ಚೆ ನಡೆಯದೆ ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರಗೊಂಡಿತ್ತು. 2015ರಿಂದ ಶಾಸಕರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಯಾಗಿರಲಿಲ್ಲ. ಬೆಲೆಏರಿಕೆಯಿಂದಾಗಿ ಸಾಕಷ್ಟು ಶಾಸಕರು ಸಂಕಷ್ಟ ಅನುಭವಿಸಿದ್ದಾರೆ. ಆದ್ದರಿಂದ ವೇತನ ಹೆಚ್ಚಿಸಲು, ಕಾಯ್ದೆ ತಿದ್ದುಪಡಿಯಾಗಬೇಕಿದೆ ಎಂದು ಮಸೂದೆ ಮಂಡಿಸಿದ್ದ ಕಾನೂನು ಮತ್ತು ಸಂಸದೀಯ ಸಚಿವ ಜೆ. ಸಿ. ಮಧುಸ್ವಾಮಿ ತಿಳಿಸಿದ್ದರು.
ವಿಧಾನಮಂಡಲದವರ ವೇತನಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಪರಿಷ್ಕರಣೆಯಿಂದ ವಾರ್ಷಿಕವಾಗಿ 67 ಕೋಟಿ ರೂ. ಹೆಚ್ಚುವರಿ ವೆಚ್ಚ ಉಂಟಾಗಲಿದೆ.
ಶಾಸಕರ ವೇತನ ಹೆಚ್ಚಳಕ್ಕೆ ರಾಜ್ಯಪಾಲರ ಸಮ್ಮತಿ
Recent Comments
ಕಗ್ಗದ ಸಂದೇಶ
on