ಶಿವಮೊಗ್ಗ : ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ರಾಜ್ಯ ಸರ್ಕಾರದ ಪರವಾಗಿ ಹರ್ಷಾ ಕುಟುಂಬಕ್ಕೆ ಪರಿಹಾರ ಚೆಕ್ ನೀಡಿದರು.
ಮಾ. 6ರಂದು ಸೀಗೆ ಹಟ್ಟಿಯಲ್ಲಿನ ಹರ್ಷಾ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಅವರು, ಯುವನಾಯಕನಾಗಿ ಬೆಳೆಯುತ್ತಿದ್ದ ಹರ್ಷನನ್ನು ನೋಡಿ ಸಹಿಸಲಾಗದೇ ಯಾರೋ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ. ಸರ್ಕಾರದ ಕಡೆಯಿಂದ 25 ಲಕ್ಷ ರೂ. ಚೆಕ್ ನ್ನು ಅವರಿಗೆ ಕೊಟ್ಟಿದ್ದೇನೆ ಎಂದು ಹೇಳಿದರು.
ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಎಲ್ಲರೂ ಜಾತಿ, ಧರ್ಮ ಮರೆತು ಸಹೋದರತ್ವದ ಭಾವನೆಯಿಂದ ಬದುಕಬೇಕು. ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತೆ ವರ್ತಿಸಬಾರದಾಗಿ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.
ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ವಿತರಣೆ
Recent Comments
ಕಗ್ಗದ ಸಂದೇಶ
on