Thursday, May 19, 2022
spot_img
Homeಸುದ್ದಿರಷ್ಯಾ- ಉಕ್ರೇನ್‌ ಅಧ್ಯಕ್ಷರೊಂದಿಗೆ ಮೋದಿ ಚರ್ಚೆ

ರಷ್ಯಾ- ಉಕ್ರೇನ್‌ ಅಧ್ಯಕ್ಷರೊಂದಿಗೆ ಮೋದಿ ಚರ್ಚೆ

ಮಾಸ್ಕೊ: ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮಾ. 7ರಂದು ದೂರವಾಣಿ ಮೂಲಕ ಚರ್ಚೆ ನಡೆಸಿ, ಉಕ್ರೇನ್‌ ರಷ್ಯಾ ಬಿಕ್ಕಟ್ಟು ಮತ್ತು ಭಾರತೀಯರ ರಕ್ಷಣೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಝೆಲೆನ್ಸ್ಕಿ ಬೆಳಗ್ಗೆ 35 ನಿಮಿಷಗಳ ಕಾಲ ಉಕ್ರೇನ್‌ನಲ್ಲಿ ಉದ್ಭವಿಸಿದ ಯುದ್ಧದ ಪರಿಸ್ಥಿತಿಯನ್ನು ಚರ್ಚಿಸಿ, ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ನೇರ ಮಾತುಕತೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವಲ್ಲಿ ಉಕ್ರೇನ್ ಸರ್ಕಾರ ನೀಡಿದ ನೆರವಿಗಾಗಿ ಪ್ರಧಾನಿ ಮೋದಿ ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಧನ್ಯವಾದ ಅರ್ಪಿಸಿ, ಸುಮಿಯಿಂದ ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಉಕ್ರೇನ್ ಸರ್ಕಾರದ ಬೆಂಬಲವನ್ನು ಪ್ರಧಾನಿ ಮೋದಿ ಕೋರಿದ್ದಾರೆ.
ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸುವಂತೆ ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಒತ್ತಾಯಿಸಿದ್ದಾರೆ. ಇದೇ ವೇಳೆ ಉಕ್ರೇನ್‌ನ ಸುಮಿ ನಗರದಿಂದ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಹಕಾರ ನೀಡುವುದಾಗಿ ಅಧ್ಯಕ್ಷ ಪುಟಿನ್ ಭರವಸೆ ನೀಡಿದ್ದಾರೆ. ರಷ್ಯಾದಿಂದ ಕದನ ವಿರಾಮ ಘೋಷಣೆಗಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಶ್ಲಾಘಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!