ಕಬ್ಬಿನಾಲೆ : ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾ.7 ರಂದು 2021 ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಮತ್ತು ಯಕ್ಷ ಸಿರಿ ಪ್ರಶಸ್ತಿ ಪುರಸ್ಕೃತರನ್ನು ಪ್ರಕಟಿಸಿದೆ.
ಹೆಬ್ರಿ ತಾಲೂಕು ಕಬ್ಬಿನಾಲೆಯ ಡಾ. ವಸಂತ್ ಭಾರದ್ವಾಜ್ ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕನ್ನಡ ವಿಭಾಗದ ಮುಖ್ಯಸ್ಥರಾಗಿ, ತರಬೇತಿ ಕಾಲೇಜಿನ ಪ್ರಾಧ್ಯಾಪಕರಾಗಿದ್ದ ಅವರು ಸಾಹಿತ್ಯಕ್ಕಾಗಿ ನಿವೃತ್ತಿ ಪಡೆದು ಯಕ್ಷಗಾನ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿನೂತನ ಸಾಧನೆ ಮಾಡಿದ್ದು, ಯಕ್ಷಗಾನ ಅಷ್ಟಾವದಾನಿ ಎಂದೇ ಪ್ರಸಿದ್ಧರಾಗಿದ್ದಾರೆ.
ಯಕ್ಷಗಾನದಲ್ಲಿ ಶ್ರೀರಾಮ ಲೀಲಾ ದರ್ಶನಂ ಎಂಬ ಮಹಾಕಾವ್ಯವನ್ನು ರಚಿಸಿದ ಇವರ “ಯಕ್ಷಗಾನ ಛಂದಸ್ಸು” ಎಂಬ ಸಂಶೋಧನಾ ಪ್ರಬಂಧಕ್ಕೆ ಮೈಸೂರು ವಿಶ್ವ ವಿದ್ಯಾಲಯದಿಂದ ಪಿಎಚ್ ಡಿ ಪದವಿ ದೊರಕಿದೆ. ಯಕ್ಷಗಾನ, ತಾಳಮದ್ದಳೆಯಲ್ಲಿ ಕಲಾವಿದರಾಗಿ, ಗಮಕ ಕಲೆಯಲ್ಲಿ ವ್ಯಾಖ್ಯಾನಕಾರರಾಗಿ, ಭಾರತೀಯ ಕಲಾವ್ಯ ಪುರಾಣಗಳ ಬಗ್ಗೆ ವಾಗ್ಮಿಯಾಗಿ ಪ್ರಸಿದ್ಧಿ ಪಡೆದಿದ್ದಾರೆ. ಇತ್ತೀಚಿಗೆ ಪ್ರಧಾನಿ ಮೋದಿಯವರ ಕವಿತೆಗಳ ಕನ್ನಡ ಅನುವಾದ ಹೊಸದಿಕ್ಕಿನ ಹಾಡು ಎಂಬ ಕೃತಿಯನ್ನು ರಚಿಸಿದ್ದಾರೆ.
ಪ್ರಶಸ್ತಿಯಿಂದ ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಸಾಧನೆ ಮಾಡಬೇಕು ಎನ್ನುವ ಸ್ಪೂರ್ತಿ ಬಂದಿದೆ ಎಂದು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳ ಕೊನೆಯಲ್ಲಿ ಕಾರ್ಕಳದಲ್ಲಿಯೇ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಕಬ್ಬಿನಾಲೆಯ ಡಾ. ವಸಂತ್ ಭಾರದ್ವಾಜ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ
Recent Comments
ಕಗ್ಗದ ಸಂದೇಶ
on