Thursday, May 19, 2022
spot_img
Homeಸುದ್ದಿದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ಪರೀಕ್ಷೆಗಳು ನಡೆಯಲಿದೆ.
ಈ ಹಿಂದೆ ಜೆಇಇ ಮುಖ್ಯ ಪರೀಕ್ಷೆಗಳು ಇರುವುದರಿಂದ ಮುಂದೂಡಲಾಗಿದ್ದ ಪರೀಕ್ಷೆಗಳ ದಿನಾಂಕ ಮರುನಿಗದಿಯಾಗಿದ್ದು, ಇದೀಗ ಹೊಸ ವೇಳಾಪಟ್ಟಿ ಪ್ರಕಟವಾಗಿದ್ದು ಇದೇ ಅಂತಿಮ ವೇಳಾಪಟ್ಟಿ ಎಂದು ತಿಳಿಸಿದೆ.
ವೇಳಾಪಟ್ಟಿ ಪ್ರಕಾರ ಪರೀಕ್ಷೆ ದಿನಾಂಕಗಳು ಇಂತಿದೆ:
ಏಪ್ರಿಲ್ 22: ತರ್ಕಶಾಸ್ತ್ರ, ಬಿಸಿನೆಸ್ ಸ್ಟಡೀಸ್
ಏಪ್ರಿಲ್ 23: ಗಣಿತ, ಶಿಕ್ಷಣ
ಏಪ್ರಿಲ್ 25: ಅರ್ಥಶಾಸ್ತ್ರ
ಏಪ್ರಿಲ್ 26: ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28: ಕನ್ನಡ, ಅರೇಬಿಕ್
ಮೇ 2: ಭೂಗೋಳ, ಜೀವಶಾಸ್ತ್ರ
ಮೇ 4: ಮಾಹಿತಿ ತಂತ್ರಜ್ಞಾನ, ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಸ್ವಾಸ್ಥ್ಯ
ಮೇ 5: ಇಂಗ್ಲಿಷ್
ಮೇ 10: ಇತಿಹಾಸ, ಭೌತಶಾಸ್ತ್ರ
ಮೇ 12: ರಾಜ್ಯಶಾಸ್ತ್ರ, ಸ್ಟಾಟಸ್ಟಿಕ್ಸ್
ಮೇ 14: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂವಿಜ್ಞಾನ, ಗೃಹ ವಿಜ್ಞಾನ
ಮೇ 18: ಹಿಂದಿ

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!