Tuesday, July 5, 2022
spot_img
Homeರಾಜ್ಯಕೈಗಾರಿಕಾ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ : ಸಚಿವ ಮುರುಗೇಶ್ ನಿರಾಣಿ

ಕೈಗಾರಿಕಾ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ : ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಹೊಸ ಕೈಗಾರಿಕಾ ನೀತಿ – 2020 – 25ರ ಅನ್ವಯ, ರಿಯಾಯಿತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಕೈಗಾರಿಕಾ ಟೌನ್‍ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಿ, ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುರುಗೇಶ್ ನಿರಾಣಿ ತಿಳಿಸಿದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!