ಕಾರ್ಕಳ: ಅದ್ದೂರಿಯ ಕಾರ್ಕಳ ಉತ್ಸವ ಅಂಗವಾಗಿ ಕಾರ್ಕಳ ಬೋಟಿಂಗ್ ಉತ್ಸವಕ್ಕೆ ಕಾರ್ಕಳ ರಾಮ ಸಮುದ್ರದಲ್ಲಿ ಚಾಲನೆ ನೀಡಲಾಯಿತು.
ಮೀನುಗಾರಿಕೆ,ಬಂದರು ,ಒಳನಾಡು ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರು ಚಾಲನೆ ನೀಡಿ ಮಾತನಾಡಿ, ನಾಡಿನ ಕಲೆ ಸಂಸ್ಕೃತಿಯನ್ನು ಅರಿತುಕೊಂಡು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಕಾರ್ಯಕ್ರಮದಲ್ಲಿ ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಕಾರ್ಕಳ ತಹಸಿಲ್ದಾರ್ ಪ್ರದೀಪ್ ಕುರ್ಡೇಕರ್ ,ಕಾರ್ಕಳ ಉತ್ಸವ ಸಮಿತಿ ಸದಸ್ಯ ಮಹಾವೀರ ಹೆಗ್ಡೆ ಉಪಸ್ಥಿತರಿದ್ದರು.