Thursday, May 19, 2022
spot_img
Homeಸುದ್ದಿಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಉಡುಪಿ :  ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿಗೆ ಸೇರಿರುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತು ಪಡಿಸಿ) ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 17ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್- www.dbcdc.karnataka.gov.in ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820- 2574882 ಅಥವಾ ತಾಲೂಕು ವಿಸ್ತೀರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!