Thursday, May 26, 2022
spot_img
HomeUncategorizedಕಾಂಗ್ರೆಸ್ ಇನ್ನು ಭೂತಕಾಲದ ಪಾರ್ಟಿ, ವರ್ತಮಾನದಲ್ಲಿ ಇಲ್ಲ, ಭವಿಷ್ಯದಲ್ಲೂ ಇರಲ್ಲ- ಸುನಿಲ್ ಕುಮಾರ್

ಕಾಂಗ್ರೆಸ್ ಇನ್ನು ಭೂತಕಾಲದ ಪಾರ್ಟಿ, ವರ್ತಮಾನದಲ್ಲಿ ಇಲ್ಲ, ಭವಿಷ್ಯದಲ್ಲೂ ಇರಲ್ಲ- ಸುನಿಲ್ ಕುಮಾರ್

ಕಾರ್ಕಳ: ಕಾಂಗ್ರೆಸ್ ಇನ್ನು ಮುಂದೆ ಭೂತಕಾಲದ ಪಾರ್ಟಿ, ವರ್ತಮಾನದಲ್ಲಿ ಇಲ್ಲ. ಭವಿಷ್ಯದಲ್ಲೂ ಕಾಂಗ್ರೆಸ್ ಇರುವುದಿಲ್ಲ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲೂ ಧೂಳಿಪಟವಾಗಿದೆ. ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡಿದ್ದು, ಕೇವಲ ಎರಡಂಕೆಯನ್ನು ದಾಟಲು ಆ ಪಕ್ಷಕ್ಕೆ ಸಾಧ್ಯವಾಗಿಲ್ಲ ಎಂದರು.

ಅಭಿವೃದ್ಧಿ, ಹಿಂದುತ್ವ, ದಕ್ಷ ಆಡಳಿತಕ್ಕೆ ಯುಪಿಯಲ್ಲಿ ಜಯ ಸಿಕ್ಕಿದೆ. ಯೋಗಿ ದಕ್ಷ ಆಡಳಿತ, ಮೋದಿ ಜನಪ್ರೀಯತೆ ಮತ್ತೆ ಯಶಸ್ವಿಯಾಗಿದೆ. ನಮ್ಮೆಲ್ಲಾ ಕಾರ್ಯಕರ್ತರಿಗೆ ಫಲಿತಾಂಶ ಉತ್ಸಾಹ ಕೊಟ್ಟಿದೆ. ಇದೇ ಉತ್ಸಾಹದಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದ ಅವರು, ಇದಕ್ಕೆ ಬೇಕಾದ ಎಲ್ಲಾ ತಂತ್ರಗಾರಿಕೆ ಮಾಡುತ್ತೇವೆ ಎಂದು ಹೇಳಿದರು. ಉತ್ತರಾಖಂಡ, ಗೋವಾ, ಮಣಿಪುರದಲ್ಲಿ ಪಕ್ಷ ಮರು ಆಯ್ಕೆಗೊಂಡಿದೆ. ಉತ್ತರಾಖಂಡದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ ಎನ್ನಲಾಗುತ್ತಿತ್ತು. ಮೂವರು ಸಿಎಂ ಬದಲಾವಣೆಯಿಂದ ವಿರೋಧಿ ಅಲೆ ಉಂಟಾಗಿದೆ ಎನ್ನುತ್ತಿದ್ದರು. ಎಲ್ಲವನ್ನೂ ಮೀರಿ ಜನ ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದರು.

ಪಂಜಾಬಿನಲ್ಲಿ ನಮಗೆ ಸುಧಾರಣೆಗೆ ಅವಕಾಶವಿದೆ. ಪಂಜಾಬ್ ನಲ್ಲಿ ಲೋಕಸಭಾ ಚುನಾವಣೆ ವೇಳೆಗೆ ಬಿಜೆಪಿ ಜನರ ವಿಶ್ವಾಸ ಗಳಿಸಲಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಫಲಿತಾಂಶ ದಿಕ್ಸೂಚಿಯಾಗಿದೆ. ರಾಹುಲ್ ಗಾಂಧಿ ನಾಯಕತ್ವ ಒಪ್ಪಲು ಸಾಧ್ಯವಿಲ್ಲ ಎಂದು ಜನತೆ ತೋರಿಸಿಕೊಟ್ಟಿದ್ದಾರೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!