Saturday, May 21, 2022
spot_img
Homeಸುದ್ದಿಪಂಚರಾಜ್ಯ ಚುನಾವಣೆ ಫಲಿತಾಂಶ : ಕಾಂಗ್ರೆಸ್ ನಾಯಕರ ಭ್ರಮೆಯ ಪೊರೆ ಕಳಚಿದೆ- ಸುನಿಲ್ ಕುಮಾರ್ 

ಪಂಚರಾಜ್ಯ ಚುನಾವಣೆ ಫಲಿತಾಂಶ : ಕಾಂಗ್ರೆಸ್ ನಾಯಕರ ಭ್ರಮೆಯ ಪೊರೆ ಕಳಚಿದೆ- ಸುನಿಲ್ ಕುಮಾರ್ 

ಕಾರ್ಕಳ : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಕರ್ನಾಟಕದಲ್ಲಿ ಚುನಾವಣೆ ಗೆದ್ದೇ ಬಿಟ್ಟೆವು ಎಂಬಂತೆ ವರ್ತಿಸುತ್ತಿದ್ದ ಕಾಂಗ್ರೆಸ್ ನಾಯಕರ  ಭ್ರಮೆಯ ಪೊರೆ ಕಳಚಿದೆ ಎಂದು ಇಂಧನ ಮತ್ತು ಕನ್ನಡ- ಸಂಸ್ಕ್ರತಿ ಸಚಿವ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಅವರ ದಕ್ಷ ಜೋಡಿ ಉತ್ತರಪ್ರದೇಶದಲ್ಲಿ ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸಿದೆ. ದೇಶದ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶವೂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಬಹುದೊಡ್ಡ ಉತ್ಸಾಹ ಮೂಡಿಸಿದೆ ಎಂದರು.

ಎರಡು ದಿನಗಳ ಹಿಂದೆ ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈಗಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ, ನಿಮ್ಮನ್ನು ಸೋಲಿಸುತ್ತೇವೆ ಎಂದು ಸವಾಲು ಹಾಕಿದ್ದರು. ಆದರೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಅವರ ಕನಸು ಕನಸಾಗಿಯೇ ಉಳಿಯಲಿದೆ. ಅವರ ಭ್ರಮೆಯ ಪೊರೆ ಮತ್ತೊಮ್ಮೆ ಕಳಚಿದೆ. ದೇಶ ಹಾಗೂ ರಾಜ್ಯದ ಮತದಾರ ಭಾರತೀಯ ಜನತಾ ಪಕ್ಷದ ಮೇಲೆ ಅಖಂಡ ವಿಶ್ವಾಸವನ್ನು ಇಟ್ಟಿದ್ದಾರೆ. ಭವಿಷ್ಯದ ಚುನಾವಣಾ ದೃಷ್ಟಿಯಿಂದ ಈ ಫಲಿತಾಂಶ ನಮ್ಮ ಕಾರ್ಯಕರ್ತರಲ್ಲಿ ಇನ್ನಷ್ಟು ಉತ್ಸಾಹ ಮೂಡಿಸಿದೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ವಿಭಜನೆಯಾದರೂ ಆಶ್ಚರ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!