ಬೆಂಗಳೂರು: ಐಪಿಎಲ್ 2022 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ಫಾಫ್ ಡು ಪ್ಲೆಸಿಸ್ ಮಾ. 12ರಂದು ನೇಮಕವಾಗಿದ್ದಾರೆ.
ಐಪಿಎಲ್ 2021 ಟೂರ್ನಿಯ ನಂತರ ವಿರಾಟ್ ಕೊಹ್ಲಿ ಆರ್ಸಿಬಿ ನಾಯಕತ್ವವನ್ನು ತೊರೆದಿದ್ದರು. ನಂತರ ಆರ್ ಸಿಬಿ ತಂಡದ ನಾಯಕ ಯಾರಾಗಬಹುದು ಎನ್ನುವ ಕುತೂಹಲ ಹೆಚ್ಚಾಗಿತ್ತು. ದಿನೇಶ್ ಕಾರ್ತಿಕ್, ಗ್ಲೇನ್ ಮ್ಯಾಕ್ಸ್ವೆಲ್ ಹೆಸರುಗಳು ನಾಯಕನ ಪಟ್ಟಿಯಲ್ಲಿ ಕೇಳಿಬಂದಿತ್ತು.