ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಹಿಂದೂ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವರದಿಯಾಗಿದೆ.

ಮೃತರನ್ನು ಪುತ್ತೂರು ತಾಲೂಕಿನ ಈಶ್ವರಮಂಗಲ ಮೈಯಳ ನಿವಾಸಿ ಜೀವನ್(23) ಎನ್ನಲಾಗಿದೆ.

ಜೀವನ್ ಸೌಂಡ್ಸ್, ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು, ಹಿಂದೂ ಐಕ್ಯ ವೇದಿಕೆ ದೇಲಂಪಾಡಿ ಘಟಕದ ಸಕ್ರಿಯ ಕಾರ್ಯಕರ್ತರಾಗಿದ್ದರು.

ಮೃತರು ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..

error: Content is protected !!
Scroll to Top