ಮಾಳ : ನಿಂತಿದ್ದ ಕಾರಿಗೆ ಬಸ್ ಡಿಕ್ಕಿಯಾಗಿ ಜಖಂಗೊಂಡ ಘಟನೆ ಮಾ. 12ರಂದು ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ನಡೆದಿದೆ.
ಮಾಳ ಬಳಿಯ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಸಂತೋಷ ಎನ್. ಎಸ್ ಎಂಬವರ ಇನೋವಾ ಕಾರಿಗೆ, ಶೃಂಗೇರಿಯಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಬಸ್ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳೂ ಜಖಂಗೊಂಡಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.