Wednesday, July 6, 2022
spot_img
Homeಸುದ್ದಿಕಾರ್ಕಳ : ಕ್ರೈಸ್ಟ್‌ ಕಿಂಗ್‌ ಶಾಲೆಯಲ್ಲಿ ಗ್ರಾಹಕ ಹಿತರಕ್ಷಣಾ ಕಾಯ್ದೆ ಮಾಹಿತಿ ಕಾರ್ಯಕ್ರಮ

ಕಾರ್ಕಳ : ಕ್ರೈಸ್ಟ್‌ ಕಿಂಗ್‌ ಶಾಲೆಯಲ್ಲಿ ಗ್ರಾಹಕ ಹಿತರಕ್ಷಣಾ ಕಾಯ್ದೆ ಮಾಹಿತಿ ಕಾರ್ಯಕ್ರಮ

ಕಾರ್ಕಳ: ಗ್ರಾಹಕರು ತಾವು ಖರೀದಿಸುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ ಇದರ ಅಧ್ಯಕ್ಷೆ ರೂಪಶ್ರೀ ತಿಳಿಸಿದರು.

ಅವರು ಕ್ರೈಸ್ಟ್‌ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಮಾ.16ರಂದು ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ಹಾಗೂ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ವಿಶ್ವ ಗ್ರಾಹಕರ ದಿನಾಚರಣೆ’ಯ ಅಂಗವಾಗಿ ಗ್ರಾಹಕ ಹಿತರಕ್ಷಣಾ ಕಾಯ್ದೆ ಕುರಿತ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗುಣಮಟ್ಟವಿಲ್ಲದ ವಸ್ತುಗಳನ್ನು ಖರೀದಿಸಬಾರದು. ಒಂದು ವೇಳೆ ಖರೀದಿಯಲ್ಲಿ ಮೋಸವಾದರೆ ಗ್ರಾಹಕ ಹಕ್ಕುಗಳ ಮೊರೆ ಹೋಗಬೇಕು. ಖರೀದಿಸುವ ವಸ್ತುಗಳಿಗೆ ರಶೀದಿಗಳನ್ನು ತಪ್ಪದೇ ಕೇಳಿ ಪಡೆದುಕೊಳ್ಳಬೇಕು. ಸರಿಯಾದ ದಾಖಲೆಗಳು ಇದ್ದಾಗ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದರು.

ನ್ಯಾಯವಾದಿ ಪ್ರಸನ್ನ ಕರ್ಮರ್ಕರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಗ್ರಾಹಕ ಹಿತರಕ್ಷಣಾ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಅವರು ವಹಿಸಿದ್ದರು.

ಸಹಾಯಕ ಸರಕಾರಿ ಅಭಿಯೋಜಕಿ ಶೋಭಾ ಎಮ್ ನಾಯಕ್, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪದ್ಮಪ್ರಸಾದ್ ಜೈನ್, ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ಸುರೇಶ್ ನಾಯಕ್, ಕಾರ್ಯದರ್ಶಿ ಇಕ್ಬಾಲ್ ಅಹಮ್ಮದ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜ, ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!