ಕಾರ್ಕಳ : ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಪತ್ತೊಂಜೆಕಟ್ಟೆಯ ಆಶ್ರಯ ಕಾಲನಿಯ ಸದಾನಂದ ಆಚಾರ್ಯ (57) ಅನಾರೋಗ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೃತ್ತಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸದಾನಂದ ಆಚಾರ್ಯ ಅವರು ಅನಾರೋಗ್ಯದಿಂದ ಕಳೆದ ಒಂದು ತಿಂಗಳಿನಿಂದ ಮನೆಯಲ್ಲೇ ಇದ್ದು,ಮಾ.17ರಂದು ಮನೆಯ ಹಿಂದಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ನಾಲ್ಕೂರು ಗ್ರಾಮದ ಮುದ್ದೂರಲ್ಲಿ ಬಾಗಲಕೋಟೆಯ ನಿವಾಸಿ ರಾಮಣ್ಣ ಮುರಟ್ಟಿ (37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಮಣ್ಣ ಮುರಟ್ಟಿ ಕಳೆದ 4 ತಿಂಗಳಿನಿಂದ ಪ್ರಸಾದ್ ಕುಮಾರ್ ಹೆಗ್ಡೆ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಈತ ವಿಪರೀತ ಮಧ್ಯವ್ಯಸನಿಯಾಗಿದ್ದು ಊರಿನಲ್ಲಿ ಸಾಲ ಮಾಡಿಕೊಂಡಿದ್ದ. ಸಾಲ ಬಾಧೆ ಮತ್ತು ಮಧ್ಯ ವ್ಯಸನದಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.