ಕಾರ್ಕಳ : ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಎನ್ಎಬಿಎಚ್ ಮಾನ್ಯತೆ ದೊರೆತಿದೆ. ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮತ್ತು ಉಪಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಅವರು ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ, ಗುಣಮಟ್ಟ ಅನುಷ್ಠಾನದ ಸಲಹೆಗಾರ ಡಾ. ಸುನೀಲ್ ಸಿ. ಮುಂಡ್ಕೂರ್, ಸಹ ವ್ಯವಸ್ಥಾಪಕ ನಟೇಶ್ ಅವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.
ರೋಗಿಗಳ ಆರೈಕೆ, ರೋಗಿಗಳ ಶಿಕ್ಷಣ ಮತ್ತು ಅರಿವು, ಶುಶ್ರೂಷ ಆರೈಕೆಯ ಗುಣಮಟ್ಟ, ಸಂವಹನ ಮತ್ತು ಮಾರ್ಗದರ್ಶನ, ಸೋಂಕು ನಿಯಂತ್ರಣ ಅಭ್ಯಾಸಗಳಂತಹ ಆಸ್ಪತ್ರೆಯ ಎಲ್ಲಾ ಕ್ಷೇತ್ರಗಳಲ್ಲಿ ಎನ್ಎಬಿಎಚ್ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸೌಲಭ್ಯಗಳಿಗೆ ಈ ಮಾನ್ಯತೆ ನೀಡಲಾಗುತ್ತದೆ. ಆರೋಗ್ಯ ಪ್ರಚಾರ ಅಭಿಯಾನ, ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸಾ ಶುಶ್ರೂಷ ಆರೈಕೆಯ ವಿಷಯದಲ್ಲಿ ರೋಗಿಗಳಿಗೆ ಸಮಗ್ರ ಆರೈಕೆಯನ್ನು ಒದಗಿಸುವ ಉದ್ದೇಶದಿಂದ ಈ ಪ್ರಮಾಣೀಕರಣ ಕಾರ್ಯಕ್ರಮವನ್ನು ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಮಾನ್ಯತಾ ಮಂಡಳಿ ಮತ್ತು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ ಕಾರ್ಯಗತಗೊಳಿಸಿದೆ.
ಕಾರ್ಕಳ : ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಎನ್ಎಬಿಎಚ್ ಮಾನ್ಯತೆ
Recent Comments
ಕಗ್ಗದ ಸಂದೇಶ
on