ಬೆಂಗಳೂರು : ಹತ್ತು ಎಚ್ಪಿ ಪಂಪ್ಸೆಟ್ ವರೆಗಿನ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಮಾ. 22ರಂದು ವಿಧಾನ ಸಭೆಯ ಶೂನ್ಯ ವೇಳೆಯಲ್ಲಿ ಬಿಜೆಪಿ ಯ ಅಪ್ಪಚ್ಚು ರಂಜನ್ ಅವರ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಕಾಫಿ ಬೆಳೆಗಾರರರಿಗೆ ಹತ್ತು ಎಚ್ ಪಿ ಪಂಪ್ ಸೆಟ್ ವರೆಗೆ ಉಚಿತ ವಿದ್ಯುತ್ ನೀಡಲು ನಮಗೆ ತಕರಾರಿಲ್ಲ, ಇದರ ದುರುಪಯೋಗವಾಗಬಾರದು. ಆದ್ದರಿಂದ ಕೆಲವು ನಿಬಂಧನೆಗಳನ್ನು ವಿಧಿಸಲಾಗುವುದು, ಅದನ್ನು ಒಪ್ಪಿಕೊಳ್ಳಬೇಕು ಎಂದು ಅವರು ಹೇಳಿದರು.
ಸುನಿಲ್ ಕುಮಾರ್ ತುರ್ತು ಸಭೆ
ಸಿಎಂ ಬೊಮ್ಮಾಯಿ ಅವರು ಘೋಷಿಸಿದ ಬೆನ್ನಲ್ಲೇ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ಯೋಜನೆ ವ್ಯಾಪ್ತಿಗೆ ಬರುವ ಫಲಾನುಭವಿ ರೈತರ ಸಂಖ್ಯೆಯ ಬಗ್ಗೆ ಮಾಹಿತಿ ಪಡೆದರು. ರಾಜ್ಯದಲ್ಲಿ 10 ಎಚ್ ಪಿ ಪಂಪ್ಸೆಟ್ ಹೊಂದಿರುವ 15 ಸಾವಿರ ಬೆಳೆಗಾರರಿದ್ದು, ಇವರನ್ನೆಲ್ಲಾ ಯೋಜನಾ ವ್ಯಾಪ್ತಿಗೆ ಸೇರಿಸಲಾಗುವುದು. ಇದಕ್ಕಾಗಿ ಶೀಘ್ರವೇ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
10 ಎಚ್ಪಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ
Recent Comments
ಕಗ್ಗದ ಸಂದೇಶ
on