ಕಾರ್ಕಳ : ಕರಿಯಕಲ್ಲು ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ಸಮಿತಿಯ ಭೂಮಿ ಪೂಜೆಯು ಮಾ. 27 ರಂದು ನಡೆಯಲಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಕ್ಷೇತ್ರದ ಪ್ರಧಾನ ಅರ್ಚಕ ಕಿಶೋರ್ ಶಾಂತಿ ನೇತೃತ್ವದಲ್ಲಿ ವೈದಿಕ ಕಾರ್ಯ ನೆರವೇರಲಿದೆ. ಕರ್ನಾಟಕ ರಾಜ್ಯ ಗಣಿ ಮತ್ತು ಕಲ್ಲು ಕ್ರಷರ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅಧ್ಯಕ್ಷತೆ ವಹಿಸಲಿದ್ದು, ಅರ್ಮುಗಂ ಮತ್ತು ಭಾಸ್ಕರ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Recent Comments
ಕಗ್ಗದ ಸಂದೇಶ
on