ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ. 28ರಿಂದ ಎ. 11ರ ವರೆಗೆ ನಡೆಯಲಿದ್ದು, ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆದು, ಜಿಲ್ಲೆ ಈ ಬಾರಿ ರಾಜ್ಯಕ್ಕೆ ಪ್ರಥಮ ಸ್ಥಾನ ಬರುವಂತಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಆವರು ಈ ಬಾರಿ 266 ಶಾಲೆಗಳ 7,229 ಬಾಲಕರು, 6,793 ಬಾಲಕಿಯರು ಸೇರಿ 14,022 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಅವರಲ್ಲಿ 13,672 ಹೊಸ ಮತ್ತು 298 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ, ಜಿಲ್ಲೆಯಲ್ಲಿ 58 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಕ್ಕೆ ಯಾವುದೇ ವಿದ್ಯಾರ್ಥಿ ಗೈರಾಗದಂತೆ ಎಚ್ಚರ ವಹಿಸುವಂತದ್ದು, ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಕ್ಲಪ್ತ ಸಮಯಕ್ಕೆ ತಲುಪಿಸಿ, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಮತ್ತು ಜೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಲಾಗುವುದು, ಪರೀಕ್ಷಾ ಕೇಂದ್ರದ ಒಳಗೆ ಯಾರೊಬ್ಬರೂ ಮೊಬೈಲ್, ಇತರೆ ಇಲೆಕ್ಟ್ರಾನಿಕ್ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.
ಮಾ.28 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ – ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Recent Comments
ಕಗ್ಗದ ಸಂದೇಶ
on