Tuesday, May 17, 2022
spot_img
Homeಸುದ್ದಿಹರ್ಷ ಕೊಲೆ ಪ್ರಕರಣ - ತನಿಖೆ ಎನ್‌ಐಎ ಗೆ ಹಸ್ತಾಂತರ

ಹರ್ಷ ಕೊಲೆ ಪ್ರಕರಣ – ತನಿಖೆ ಎನ್‌ಐಎ ಗೆ ಹಸ್ತಾಂತರ

ನವದೆಹಲಿ : ಫೆ. 20ರಂದು ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದೆ.
ಪ್ರರಕರಣಕ್ಕೆ ಸಂಬಂಧಿಸಿದಂತೆ ಮಾ. 23ರಂದು ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭವಾಗಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ. ಹರ್ಷ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ರಾಜ್ಯ ಪೋಲಿಸರು, ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ – 1967ರ ಅಡಿ ಶಿವಮೊಗ್ಗದಲ್ಲಿ 10 ಜನರನ್ನು ಬಂದಿಸಿದ್ದು, ಎಲ್ಲಾ ಆರೋಪಿಗಳನ್ನು ಶೀಘ್ರವೇ ಎನ್‌ಐಎ ತನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಫೆ. 22ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ, ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಪ್ರಕರಣವನ್ನು ಎನ್‌ಐಎ ಗೆ ವಹಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಪ್ರಕರಣದ ತನಿಖೆಗೆ ಆದೇಶಿಸಿದ್ದರಿಂದ ತನಿಖಾ ಸಂಸ್ಥೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!