ಉಡುಪಿ : ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹಿತರಕ್ಷಣೆಗೆ ಸರಕಾರ ವಿಶೇಷ ಕಾನೂನುಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಅನುಷ್ಠಾನಗೊಳಿಸಿ ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ನೆರವು ಹಾಗೂ ಪರಿಹಾರ ಒದಗಿಸಿಕೊಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ಎಂ. ರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಜಿ.ಪಂ. ಸಭಾಂಗಣದಲ್ಲಿ ಮಾ. 23ರಂದು ನಡೆದ ಪ.ಜಾತಿ ಮತ್ತು ಪಂಗಡದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2012 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಪ.ಜಾತಿ ಹಾಗೂ ಪಂಗಡದ 28 ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, 26 ಪ್ರಕರಣಗಳು ದಾಖಲಾಗಿದೆ. ಅದರಲ್ಲಿ 13 ಪ್ರಕರಣಗಳು ಖುಲಾಸೆಯಾಗಿದ್ದು, 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. 12 ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿದೆ. ಪ್ರಕರಣಗಳು ಖುಲಾಸೆಯಾಗಲು ಕಾರಣವೇನು ಎಂಬುವುದನ್ನು ಅರಿತು, ಬಾಕಿ ಇರುವ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕೆಯಾಗುವಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಡಿಸಿ ಮನ್ನಾ ಭೂಮಿಯನ್ನು ಉಳ್ಳವರೇ ಅತಕೃಮಣ ಮಾಡುತ್ತಿರುವುದಾಗಿ ಮತ್ತು, ಪ.ಜಾತಿ, ಪಂಗಡಕ್ಕೆ ಸೇರದೇ ಇರುವ ಅನರ್ಹರು ಸುಳ್ಳು ಜಾತಿ ಪತ್ರವನ್ನು ಪಡೆಯುತ್ತಿರುವುದಾಗಿ ದೂರುಗಳು ಕೇಳಿಬರುತ್ತಿದ್ದು, ಇವುಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ.ಜಾತಿ, ಪಂಗಡದವರ ಮೇಲಿನ ದೌರ್ಜನ್ಯ ತಡೆಗೆ ಕ್ರಮ : ಕೂರ್ಮಾ ರಾವ್
Recent Comments
ಕಗ್ಗದ ಸಂದೇಶ
on