Thursday, May 19, 2022
spot_img
Homeಸುದ್ದಿಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬೆದರಿಕೆ ಪ್ರಕರಣ: ಎರಡನೇ ಆರೋಪಿ ಬಂಧನ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬೆದರಿಕೆ ಪ್ರಕರಣ: ಎರಡನೇ ಆರೋಪಿ ಬಂಧನ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವತಿಲ್ಲ ಎಂದು ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾ. 25ರಂದು ಬಂಧಿಸಲಾಗಿದೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯನ್ನು ಕರ್ನಾಟಕ ಪೊಲೀಸರು ಬಂಧನ ಮಾಡಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ಮಾ. 24ರಂದು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಆರೋಪಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು. ಪ್ರಕರಣದ ಹಿಂದೆ ಯಾವ ಸಂಘಟನೆಗಳು ಕೈವಾಡವಿದೆ ಎಂಬುವುದರ ಬಗ್ಗೆ ತನಿಖೆ ನಡೆಯುತ್ತಿದೆ.
ಜಡ್ಜ್ ಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟಾರೆ ಇಬ್ಬರೂ ಆರೋಪಿಗಳ ಬಂಧನವಾಗಿದೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!