ಲಖನೌ : ಪಂಚ ರಾಜ್ಯಗಳ ಪೈಕಿ ಇಡೀ ದೇಶದ ಗಮನ ಸೆಳೆದಿದ್ದು ಅಂದರೆ ಉತ್ತರ ಪ್ರದೇಶ ಚುನಾವಣೆ. ಈ ಚುನಾವಣೆಯಲ್ಲಿ ಅಮೋಘ ಜಯ ಸಾಧಿಸಿದ ಯೋಗಿ ಆದಿತ್ಯನಾಥ್, ಭಾರಿ ಜನಬೆಂಬಲ ಮತ್ತು ಭಾರಿ ಜನಸ್ತೋಮದ ಮಧ್ಯೆ ಉತ್ತರ ಪ್ರದೇಶದ ದ್ವಿತೀಯ ಸಿ.ಎಂ ಆಗಿ ಯೋಗಿ ಆದಿತ್ಯನಾಥ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಾನೂನು ಸಚಿವರಾಗಿ ಈ ಹಿಂದೆ ಮೋದಿ ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸಿದ ಇವರು ಈಗ ಡಿಸಿಎಂ ಆಗಿ ಆಯ್ಕೆಯಾದರು. ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದರೊಂದಿಗೆ 5ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿದಿರುವ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಯೋಗಿ ಪಾತ್ರರಾಗಿದ್ದಾರೆ. ಮಾ.24 ರಂದು ಬಿಜೆಪಿಯ ಶಾಸಕಾಂಗ ಪಕ್ಷವು, ಯೋಗಿ ಅವರನ್ನು ತನ್ನ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದೆ. ಮಾ. 25 ರ ಸಂಜೆ 4 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭವ್ಯ ಸಮಾರಂಭದಲ್ಲಿ ಯೋಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಯೋಗಿ ಆದಿತ್ಯನಾಥ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅವರೊಂದಿಗೆ ಸುಮಾರು 52 ಸಚಿವರು ಪ್ರಧಾನಿ ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ರಾಜ್ಯ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು