ಪ್ರತಿ ವರ್ಷ ಮಾರ್ಚ್ 16 ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಬೆಂಗಳೂರು: ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಆಚರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಮಾ. 25ರಂದು ಆದೇಶ ಹೊರಡಿಸಲಾಗಿದೆ.
ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಬೋಧಿಸಿದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರ್ಕಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.





























































































































































































































error: Content is protected !!
Scroll to Top