ಕಾರ್ಕಳ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ. 28ರ ಸೋಮವಾರದಿಂದ ಪ್ರಾರಂಭವಾಗಲಿದ್ದು, ಎ. 11ರವರೆಗೆ ನಡೆಯಲಿದೆ. ಕಾರ್ಕಳದಲ್ಲಿ ಈ ಬಾರಿ ಒಟ್ಟು 2604 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10:30ರಿಂದ 1:40ರವರೆಗೆ ಪರೀಕ್ಷೆ ನಡೆಯಲಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೊಠಡಿಗೊಬ್ಬರು ಕೊಠಡಿ ಮೇಲ್ವಿಚಾರಕರು, ಶಾಲೆಗೆ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನೀಯ ಜಾಗ್ರತದಳದ ಅಧಿಕಾರಿ, ದೈಹಿಕ ಶಿಕ್ಷಕ, ಮೊಬೈಲ್ ಸ್ವಾಧೀನಧಿಕಾರಿ ಇರಲಿದ್ದಾರೆ. ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
8,73,846 ವಿದ್ಯಾರ್ಥಿಗಳು
ರಾಜ್ಯದ 3,444 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಹಿಜಾಬ್ ಧರಿಸಿ ಬಂದಲ್ಲಿ ಪರೀಕ್ಷೆಗೆ ಅವಕಾಶ ಸಿಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 178, ಎಸ್.ವಿ.ಟಿ. ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ 267, ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 390, ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 374, ನಿಟ್ಟೆ ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ 143, ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 188, ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 242, ಮುನಿಯಾಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 255, ಶ್ರೀಮದ್ ಭುವನೇಂದ್ರ ಫ್ರೌಢ ಶಾಲೆಯಲ್ಲಿ 220, ಕ್ರೈಸ್ಟ್ ಕಿಂಗ್ ಆಂಗ್ಲ ಮಾದ್ಯಮ ಪ್ರೌಢ ಶಾಲೆಯಲ್ಲಿ 220, ಹೊಸ್ಮಾರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 127 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿದ್ದಾರೆ.
ಸುಸೂತ್ರವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಎಲ್ಲ ಮಕ್ಕಳು ಪರೀಕ್ಷೆಗೆ ಹಾಜರಾಗಬೇಕೆಂಬ ನಿಟ್ಟಿನಲ್ಲಿ ಮನೆ ಭೇಟಿ, ಶಿಕ್ಷಕರ ಕಾರ್ಯಗಾರ ನಡೆಸಲಾಗಿದೆ. ಕಾರ್ಕಳ, ಹೆಬ್ರಿ ತಾಲೂಕಿಗೆ ಉತ್ತಮ ಫಲಿತಾಂಶ ದೊರೆಯುವ ವಿಶ್ವಾಸವೂ ಇದೆ.
ವೆಂಕಟೇಶ್ ನಾಯಕ್
ಕ್ಷೇತ್ರ ಶಿಕ್ಷಣಾಧಿಕಾರಿ, ಕಾರ್ಕಳ
ಮಾರ್ಚ್ 28 | ಪ್ರಥಮ ಭಾಷೆ( ಕನ್ನಡ, ಇಂಗ್ಲೀಷ್, ಸಂಸ್ಕೃತ) |
ಮಾರ್ಚ್ 30 | ದ್ವಿತೀಯ ಭಾಷೆ (ಇಂಗ್ಲೀಷ್, ಕನ್ನಡ) |
ಎಪ್ರಿಲ್ 1 | ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್ |
ಏಪ್ರಿಲ್ 4 | ಗಣಿತ |
ಏಪ್ರಿಲ್ 6 | ಸಮಾಜ ವಿಜ್ಞಾನ |
ಏಪ್ರಿಲ್ 8 | ತೃತೀಯ ಭಾಷೆ |
ಏಪ್ರಿಲ್ 11 | ವಿಜ್ಞಾನ |