Saturday, May 21, 2022
spot_img
Homeಸುದ್ದಿಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ - ಹಿಜಾಬ್‌ ಧರಿಸುವಂತಿಲ್ಲ

ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ – ಹಿಜಾಬ್‌ ಧರಿಸುವಂತಿಲ್ಲ

ಬೆಂಗಳೂರು : ಮಾ. 28ರಿಂದ ಎ.11ರ ವರೆಗೆ ನಡೆಯಲಿರುವ ಎಸ್‌.ಎಸ್‌.ಎಲ್‌.ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು, ಹಿಜಾಬ್‌ ಧರಿಸಲು ಅವಕಾಶವಿಲ್ಲ ಎಂದು ರಾಜ್ಯ ಸರಕಾರ ಸುತ್ತೋಲೆಯನ್ನು ಹೊರಡಿಸಿದೆ.
ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗದಿ ಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು, ಮತ್ತು ಖಾಸಗಿ ಶಾಲೆಗಳಲ್ಲಿ ಶಾಲಾ ಆಡಳಿತ ಮಂಡಳಿಗಳು ನಿಗದಿ ಪಡಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸುವಂತೆ ಆದೇಶಿಸಲಾಗಿದೆ.
ಪರೀಕ್ಷಾ ಕೊಠಡಿಗಳಿಗೆ ಮೊಬೈಲ್‌, ಅತ್ಯಾಧುನಿಕ ಕ್ಯಾಲ್ಕುಲೇಟರ್‌ ಸಹಿತ ಯಾವುದೇ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಮತ್ತು ಈ ಬಗ್ಗೆ ಪರೀಕ್ಷಾ ಕೇಂದ್ರದ ಮೊಬೈಲ್‌ ಸ್ವಾಧೀನ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!