ಪಣಜಿ : ಗೋವಾ ಮುಖ್ಯಮಂತ್ರಿಯಾಗಿ ಸತತ ದ್ವಿತೀಯ ಬಾರಿ ಪ್ರಮೋದ್ ಸಾವಂತ್ ಅವರು ಮಾ. 28 ರಂದು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯ ರಾಜಧಾನಿ ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಮೋದ್ ಸಾವಂತ್ ಜೊತೆಗೆ ವಿಶ್ವಜಿತ್ ರಾಣೆ, ಮೌವಿನ್ ಗೊಡಿನ್ಹೊ, ರವಿ ನಾಯ್ಕ್, ನೀಲೇಶ್ ಕಬ್ರಾಲ್, ಸುಭಾಷ್ ಶಿರೋಡ್ಕರ್, ರೋಹನ್ ಖೌಂಟೆ, ಗೋವಿಂದ್ ಗೌಡೆ ಮತ್ತು ಅಟಾನಾಸಿಯೊ ಮೊನ್ಸೆರಾಟ್ಟೆ ಅವರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Recent Comments
ಕಗ್ಗದ ಸಂದೇಶ
on