ತೈಲ ಬೆಲೆ ಏರಿಕೆ ಕುರಿತು ಚರ್ಚೆಗೆ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಒತ್ತಾಯ

ನವದೆಹಲಿ : ತೈಲ ಬೆಲೆ ಏರಿಕೆ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಒತ್ತಾಯಿಸಿದವು. ಆದರೆ ಪ್ರತಿಪಕ್ಷಗಳ ಬೇಡಿಕೆಯನ್ನು ತಿರಸ್ಕರಿಸಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ನಿಮಗೆ “ಸಾಕಷ್ಟು ಸಮಯಾವಕಾಶ” ನೀಡುವುದಾಗಿ ಭರವಸೆ ನೀಡಿದರು. ಮಾ.28ರಂದು ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿಆರ್ ಬಾಲು ಅವರು, ಕಳೆದ ಒಂದು ವಾರದಲ್ಲಿ ಆರನೇ ಬಾರಿ ಏರಿಕೆಯಾಗಿರುವ ತೈಲ ಬೆಲೆ ಹೆಚ್ಚಳದ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಎಡಪಕ್ಷಗಳು ಸೇರಿದಂತೆ ವಿರೋಧ ಪಕ್ಷಗಳು ಚರ್ಚೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತೈಲ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.





























































































































































































































error: Content is protected !!
Scroll to Top