ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರನ್ನು ಪರಿಶೀಲನೆ ನಡೆಸಿ, ಜೂನ್ ತಿಂಗಳ ಒಳಗಾಗಿ 8 ಲಕ್ಷ ಮಂದಿಗೆ ಬಿಪಿಎಲ್ ಕಾರ್ಡ್ ನೀಡುವ ಗುರಿ ಹೊಂದಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸಚಿವ ಉಮೇಶ್ ಕತ್ತಿ ಮಾ. 28ರಂದು ಹೇಳಿದರು.
ವಿಧಾನ ಪರಿಷತ್ ನಲ್ಲಿ ಯು.ಬಿ. ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ 3 ವರ್ಷಗಳ ಅವಧಿಯಲ್ಲಿ 15,53,745 ಮಂದಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 8,03,782 ಅರ್ಜಿದಾರರಿಗೆ ಪಡಿತರ ಚೀಟಿ ನೀಡಲಾಗಿದೆ. ಈ ಪೈಕಿ 3.24 ಲಕ್ಷ ಮಂದಿ ಅರ್ಜಿ ತಿರಸ್ಕೃತವಾಗಿದ್ದು, 4.24 ಲಕ್ಷ ಮಂದಿಗೆ ಬಿಪಿಎಲ್ ಕಾರ್ಡ್ ಅನ್ನು ಒಂದು ತಿಂಗಳ ಒಳಗಾಗಿ ನೀಡಿ, ಇನ್ನುಳಿದ 3 ಲಕ್ಷಕ್ಕೂ ಅಧಿಕ ಮಂದಿಗೆ ಜೂನ್ ತಿಂಗಳ ಒಳಗಾಗಿ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಲಾಕ್ ಡೌನ್ ಕಾರಣದಿಂದಾಗಿ ಹೊಸಪಡಿತರ ಚೀಟಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲನೆ ಹಾಗೂ ಬಯೋಮೆಟ್ರಿಕ್ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಅತಿಶೀಘ್ರದಲ್ಲೇ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದ ಬಯೋಮೆಟ್ರಿಕ್ ಬಳಕೆಯನ್ನು ಹಿಂಪಡೆದ ಕಾರಣ, ಪಡಿತರ ಚೀಟಿಯನ್ನು ವಿತರಿಸುವ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಪ್ರಸ್ತುತ ಹೊಸಪಡಿತರ ಚೀಟಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ಮನೆ-ಮನೆಗೂ ತೆರಳಿ, ಪರಿಶೀಲನೆ ನಡೆಸಿ ಜೂನ್ ತಿಂಗಳ ಒಳಗಾಗಿ ಪಡಿತರ ಚೀಟಿಯನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಜೂನ್ ವೇಳೆಗೆ 8 ಲಕ್ಷ ಮಂದಿಗೆ ಬಿಪಿಎಲ್ ಕಾರ್ಡ್ : ಉಮೇಶ್ ಕತ್ತಿ
Recent Comments
ಕಗ್ಗದ ಸಂದೇಶ
on