ಕಾರ್ಕಳ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡಿರುವ ಘಟನೆ ಮಾ. 29ರಂದು ಪುಲ್ಕೇರಿ ಬೈಪಾಸ್ ಬಜಾಜ್ ಶೋ ರೂಂ ಬಳಿ ನಡೆದಿದೆ. ಗಾಯಾಳು ಬಾಲಕನನ್ನು ತೇಜಸ್ (13 ವ.) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಪುಲ್ಕೇರಿ ಕಡೆಗೆ ಸಾಗುತ್ತಿದ್ದ ಮಾರುತಿ ಸುಜುಕಿ ಕಾರು ಡಿಕ್ಕಿ ಹೊಡೆದ ಪರಿಣಾಮ ದೂರ ಎಸೆಯಲ್ಪಟ್ಟ ತೇಜಸ್‌ಗೆ ಗಂಭೀರ ಗಾಯಗಳಾಗಿವೆ. ಆತನನ್ನು ಕಾರ್ಕಳ ಸಿಟಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments
ಕಗ್ಗದ ಸಂದೇಶ
on