ಮಾ. 31ರಂದು ಅಮಿತ್ ಶಾ ಕರ್ನಾಟಕ ಪ್ರವಾಸ – ಸಿದ್ಧತೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ನಾಳೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ನಡೆಸಲಾದ ಸಿದ್ಧತೆ‌ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪರಿಶೀಲಿಸಿದ‌ರು.

ಅಮಿತ್ ಶಾ ಅವರು ಎ. 1 ರಂದು ವಿವಿಧ ಕಾರ್ಯಕ್ರಮ‌ಗಳಲ್ಲಿ ಭಾಗವಹಿಸಲಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಹಕಾರಿ ಸಂಘಗಳ ಸಮಾವೇಶ, ಕಾರ್ಯಕ್ರಮಗಳು, ಮುದ್ದೇನಹಳ್ಳಿ ಕಾಲೇಜು ಶಿಲಾನ್ಯಾಸ ಸಮಾರಂಭದಲ್ಲಿ ಶಾ ಭಾಗವಹಿಸಲಿದ್ದಾರೆ. ಜೊತೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯ ಅಧ್ಯಕ್ಷತೆಯನ್ನೂ ಶಾ ವಹಿಸಿಕೊಳ್ಳಲಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಸಹಕಾರ ಸಮಾವೇಶದ ವೇದಿಕೆಯ ಸಿದ್ಧತೆ‌ಯನ್ನೂ ಸಿಎಂ ಬೊಮ್ಮಾಯಿ ಅವರು ಇಂದು ಪರಿಶೀಲಿಸಿದರು.

















































error: Content is protected !!
Scroll to Top