ಕಾರ್ಕಳ : ಮಂಗಳೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ತಾಲೂಕಿನ ಆಯ್ದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ “ಮನ್ವಂತರ ಶಿಕ್ಷಣದ ಕಡೆಗೆ ಒಂದು ಹೆಜ್ಜೆ” ಎಂಬ ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕಾರ್ಯಗಾರ ಎ. 1 ರ ಬೆಳಗ್ಗೆ 9.00 ಗಂಟೆಗೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಆಯೋಜಿಸಲಾಗಿದ್ದು, ಸಚಿವ ವಿ. ಸುನಿಲ್ ಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ವಿಧಾನ ಪರಿಷತ್ ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಧ್ಯಕ್ಷತೆ ವಹಿಸಲಿರುವರು. ಈ ಕಾರ್ಯಕ್ರಮದಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯಕವಾಗಲಿದ್ದು, ಕಾರ್ಕಳ ತಾಲೂಕಿನ ಎಲ್ಲಾ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ. ಉಡುಪಿ ಜಿಲ್ಲಾಧಿಕಾರಿ, ವಿಶ್ವವಿದ್ಯಾನಿಲಯದ ಕುಲಪತಿ, ವಿಶ್ವವಿದ್ಯಾನಿಲಯದ ಕುಲಸಚಿವ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಭಾಗವಹಿಸಲಿದ್ದಾರೆ.























