Tuesday, May 17, 2022
spot_img
Homeದೇಶಎ.1: ಪರೀಕ್ಷಾ ಪೆ ಚರ್ಚಾ‌ದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ಸಂವಾದ

ಎ.1: ಪರೀಕ್ಷಾ ಪೆ ಚರ್ಚಾ‌ದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ಸಂವಾದ

ನವದೆಹಲಿ: ಎ. 1 ರಂದು ನಡೆಯಲಿರುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ‌ದಲ್ಲಿ ಪ್ರಧಾನಿ ಮೋದಿ ಅವರು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ಈ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ತಮ್ಮ ಅಂತಿಮ ಪರೀಕ್ಷೆ‌ಗಳನ್ನು ಬರೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿ‌ಗಳ ಜೊತೆಗೆ ಮೋದಿ ಚರ್ಚೆ ನಡೆಸಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಿ, ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಈ ಸಂವಾದ ಮಹತ್ವ ಪಡೆದಿದೆ.

ದೇಶದೆಲ್ಲೆಡೆ‌ಯಿಂದ ಸುಮಾರು 40 ವಿದ್ಯಾರ್ಥಿಗಳು ಈ ಚರ್ಚೆ‌ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ‌ದ ಒಬ್ಬ ವಿದ್ಯಾರ್ಥಿಯೂ ಈ ಸಂವಾದದಲ್ಲಿ ಭಾಗವಹಿಸಲಿದ್ದಾನೆ. ಮೈಸೂರಿನ ಜವಾಹರ ನವೋದಯ ವಿದ್ಯಾಲಯದ ಎಂ. ಬಿ. ತರುಣ್ ಈ ಬಾರಿಯ ಪರೀಕ್ಷಾ ಪೆ ಚರ್ಚಾ‌ದಲ್ಲಿ ಕರ್ನಾಟಕ‌ವನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!