ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ಹಲವು ವಿಷಗಳು ಚರ್ಚೆಯಲ್ಲಿದ್ದು, ಸಾರ್ವಜನಿಕ ಶಾಂತಿ, ಕಾನೂನು ಕಾಪಾಡಲು ಎಲ್ಲರ ಸಹಕಾರ ಅಗತ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಬಗೆಹರಿಸಲಾಗಿದೆ. ರಾಜ್ಯದಲ್ಲಿ ಈ ವರೆಗೆ ಎಲ್ಲರೂ ಸಾಮರಸ್ಯದ ಬದುಕು ಸಾಗಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಶಾಂತಿ, ಅಭಿವೃದ್ಧಿಗೆ ರಾಜ್ಯ ಹೆಸರಾಗಿದ್ದು, ಇದನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರ ಪ್ರಯತ್ನ ಮುಖ್ಯ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷಗಳ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕಿರಣ್ ಮಜುಂದಾರ್ ಷಾ ಮಾಡಿದ ಟ್ವೀಟ್ಗೆ ಮುಖ್ಯಮಂತ್ರಿಗಳು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಸಮಸ್ಯೆಗಳು ಉದ್ಭವಿಸಿದಾಗ ಕುಳಿತು ಚರ್ಚಿಸಿ, ಬಗೆಹರಿಸುವುದು ಸಾಧ್ಯ. ಆದ್ದರಿಂದ ಎಲ್ಲರಲ್ಲೂ ತಾಳ್ಮೆ ಇರಲಿ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯ: ಸಿಎಂ ಬೊಮ್ಮಾಯಿ
Recent Comments
ಕಗ್ಗದ ಸಂದೇಶ
on