ಎ.1: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಲೋಗೋ, ಸಾಂಗ್ ಬಿಡುಗಡೆ

ಬೆಂಗಳೂರು: ಖೇಲೋ‌ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಎ. 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ ಬಿಡುಗಡೆಗೊಳಿಸಲಾಗುವುದಾಗಿ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.
ಎ. 24 ರಿಂದ ಮೇ 3 ವರೆಗೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಡೆಯಲಿದ್ದು, ಎ. 1 ರಂದು ಕ್ರೀಡಾಕೂಟದ ಲೋಗೋ, ಥೀಮ್ ಸಾಂಗ್, ಜೆರ್ಸಿ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಯುವಜನ ಮತ್ತು ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಂದ್ರ ಗೃಹ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಸಿತ್ ಪ್ರಾಮಾಣಿಕ್, ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮ‌ದಲ್ಲಿ ಭಾಗವಹಿಸಲಿದ್ದಾರೆ.
10 ದಿನಗಳ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಜುಡೋ,‌ ವಾಲಿಬಾಲ್, ಕಬ್ಬಡಿ, ಬಾಸ್ಕೆಟ್ ಬಾಲ್ , ಕರಾಟೆ , ಮಲ್ಲಕಂಬ ಸೇರಿದಂತೆ 20 ಕ್ರೀಡೆಗಳು ನಡೆಯಲಿದ್ದು, ದೇಶದ 200 ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 8 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು, ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ.
ಕ್ರೀಡೆಯ ಜೊತೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು ಸರಕಾರದ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಅನ್ನು “ಹಸಿರು ಕ್ರೀಡಾಕೂಟ” (ಗ್ರೀನ್ ಗೇಮ್ಸ್ )ಎಂದು ಘೋಷಣೆ ಮಾಡಲಾಗಿದೆ.





























































































































































































































error: Content is protected !!
Scroll to Top