ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣ – ರೂ. 2 ಕೋಟಿ ಅನುದಾನ ಬಿಡುಗಡೆ

ಉಡುಪಿ : ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಾ.30 ರಂದು ಬೆಂಗಳೂರು ವಿಧಾನ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಅವರನ್ನು ಭೇಟಿಯಾದ ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಭಾಜಪ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉದಯ ಕುಮಾರ್ ಶೆಟ್ಟಿ ಕಿದಿಯೂರು ಹಾಗೂ ರಂಗಭೂಮಿ ಉಡುಪಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಅವರನ್ನೊಳಗೊಂಡ ನಿಯೋಗ, ಉಡುಪಿ ಜಿಲ್ಲಾ ರಂಗಮಂದಿರದ ನಿರ್ಮಾಣದ ತುರ್ತು ಅಗತ್ಯತೆಯ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಸಚಿವ ಸುನಿಲ್ ಕುಮಾರ್ ಈ ಕೂಡಲೇ, ಆರಂಭಿಕವಾಗಿ 2 ಕೋಟಿ ರೂ. ಅನುದಾನಗಳನ್ನು ಇಲಾಖೆಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಹಾಗೂ ಸುಮಾರು 12 ವರ್ಷದ ಹಿಂದೆಯೇ ಸರ್ಕಾರದಿಂದ ಬಿಡುಗಡೆ ಆಗಿ ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇರುವ ರೂ 50 ಲಕ್ಷ ಅನುದಾನದೊಂದಿಗೆ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು ಎಂದು ರಂಗ ಭೂಮಿ ಉಡುಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.















































































































































error: Content is protected !!
Scroll to Top