Tuesday, May 17, 2022
spot_img
Homeಸುದ್ದಿಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರ್ಕಾರದ ವಶಕ್ಕೆ

ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರ್ಕಾರದ ವಶಕ್ಕೆ

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ, ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ವಶಕ್ಕೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಖಾಸಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಆಸ್ಪತ್ರೆಗೆ ಹೆಚ್ಚುವರಿಯಾಗಿ 103 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ವಾರ್ಷಿಕ ಅನುದಾನ 9. 83 ಕೋಟಿ ರೂ. ಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಬಡ ಹೆಣ್ಣುಮಕ್ಕಳಿಗೆ ಉಚಿತವಾಗಿ ಹೆರಿಗೆ ಸೇವೆ ನೀಡುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಆಸ್ಪತ್ರೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಖಾಸಗಿ ಸಂಸ್ಥೆಗೆ ವಹಿಸಿತ್ತು. ಆ ಬಳಿಕ ಸಿಬ್ಬಂದಿಗಳ ವೇತನ, ಆಸ್ಪತ್ರೆಯ ಅಸಮರ್ಪಕ ನಿರ್ವಹಣೆ, ರೋಗಿಗಳ ಚಿಕಿತ್ಸೆಗೆ ತೊಂದರೆ ಮೊದಲಾದ ಸಮಸ್ಯೆ‌ಗಳು ಉದ್ಭವವಾಗಿತ್ತು. ಈ ಸಮಸ್ಯೆಗಳನ್ನು ಪರಿಹರಿಸುವಂತೆ ವಿಧಾನ ಸಭೆ ಅಧಿವೇಶನದಲ್ಲಿ ಸಚಿವ ಸುಧಾಕರ್‌ ಅವರಿಗೂ ಮನವಿ ಮಾಡಲಾಗಿತ್ತು.
ಇತ್ತೀಚೆಗೆ ಜಿಲ್ಲಾ ಆಸ್ಪತ್ರೆಯ ಕಟ್ಟಡ ಶಿಲಾನ್ಯಾಸಕ್ಕೆ ಬಂದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈ ಆಸ್ಪತ್ರೆಯನ್ನು ಮತ್ತೆ ಸರ್ಕಾರದ ವಶಕ್ಕೆ ಪಡೆಯುವ ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಸರ್ಕಾರ ನಡೆದುಕೊಂಡಿದೆ ಎಂದು ರಘುಪತಿ ಭಟ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!