Thursday, May 26, 2022
spot_img
Homeದೇಶವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ರೂ. 250 ಏರಿಕೆ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ರೂ. 250 ಏರಿಕೆ

ನವದೆಹಲಿ: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ. 250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ.

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ. ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2,253 ರೂ. ಪಾವತಿ ಮಾಡಬೇಕಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಏರಿಕೆಯಾಗಿದೆ.
 
ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾದ ಹೆಚ್ಚಳ ಕಂಡು ಬರುತ್ತಿರುವ ಕಾರಣ ಅನಿಲ ಬೆಲೆ ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಅಡುಗೆ ಅನಿಲ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!