Thursday, May 26, 2022
spot_img
Homeದೇಶಜಮ್ಮು-ಕಾಶ್ಮೀರ : ಶೋಪಿಯಾನ್‌ನಲ್ಲಿ ಎನ್ಕೌಂಟರ್ - ಓರ್ವ ಉಗ್ರ ಹತ

ಜಮ್ಮು-ಕಾಶ್ಮೀರ : ಶೋಪಿಯಾನ್‌ನಲ್ಲಿ ಎನ್ಕೌಂಟರ್ – ಓರ್ವ ಉಗ್ರ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯ ತುರ್ಕ್ವಾಂಗಮ್ ಪ್ರದೇಶ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.

ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು ಓರ್ವ ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!