ಕ್ರಿಯಾಶೀಲ ಕಾರ್ಯಾಗಾರದ ಸಂಪೂರ್ಣ ಲಾಭ ಪಡೆದುಕೊಳ್ಳಿ – ಸುನಿಲ್ ಕುಮಾರ್

ಕಾರ್ಕಳ : ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಎಂಬಂತೆ ಮಂಗಳೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಮನ್ವಂತರ ಶಿಕ್ಷಣದ ಕಡೆಗೆ ಒಂದು ಹೆಜ್ಜೆ ಎಂಬ ವಿಶೇಷ ಶೀರ್ಷಿಕೆಯಡಿ, ಛತ್ರಪತಿ ಫೌಂಡೇಶನ್ ನ ನೇತೃತ್ವದಲ್ಲಿ ಕಾರ್ಕಳ ತಾಲೂಕಿನ ಆಯ್ದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಮಾಹಿತಿ ಕಾರ್ಯಗಾರವು ಎ.೧ ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಸಟಿಸಿದರು. ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಮಾಜಿ ಶಾಸಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸುಬ್ರಹ್ಮಣ್ಯ ಯಡಪಡಿತ್ತಾಯ, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್, ಹಿರಿಯ ನ್ಯಾಯವಾದಿ ಎಮ್. ಕೆ. ವಿಜಯ ಕುಮಾರ್, ಸಂಪನ್ಮೂಲ ವ್ಯಕ್ತಿ ಡಾ. ಕರುಣಾಕರ್ ಕೋಟೆಗಾರ್, ಮನ್ವಂತರ ಸಂಸ್ಥೆಯ ಅಧ್ಯಕ್ಷ ಅಭಿಷೇಕ್ ಸುವರ್ಣ, ಛತ್ರಪತಿ ಫೌಂಡೇಶನ್ ನ ಅಧ್ಯಕ್ಷ ಗಿರೀಶ್ ರಾವ್ ಉಪಸ್ಥಿತರಿದ್ದರು. ಬಳಿಕ ಶಿರ್ಡಿ ಸಾಯಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಯೋಜಕ ಆಶೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸೌಮ್ಯ ವಂದಿಸಿದರು.









































































































































































error: Content is protected !!
Scroll to Top