ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸುವ ಸಲುವಾಗಿ ರೂ. 100 ಕೋಟಿ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು. ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ತಿಳಿದಿರುವ ತಜ್ಞರ ಹೆಸರುಗಳನ್ನು ಒದಗಿಸಲು ಮನವಿ ಮಾಡಲಾಗಿದೆ. ಶ್ರೀ ರಾಮ ಸೇವಾ ಮಂಡಳಿಯವರು ಸ್ಥಾಪಿಸಲು ಉದ್ದೇಶಿಸಿರುವ ಕಲಾ ಸಾಕೇತ್ ಸ್ಥಾಪನೆಗೆ ಸರ್ಕಾರ ನೆರವು ಒದಗಿಸುವುದು ಎಂದು ಭರವಸೆ ನೀಡಿದರು.



































































































error: Content is protected !!
Scroll to Top