ಮುಂಬೈ : 15 ನೇ ಆವೃತ್ತಿಯ ಐಪಿಎಲ್‌ನಲ್ಲಿ ಸೋಲಿನ ಆರಂಭ ಪಡೆದ ಹೊರತಾಗಿಯೂ, ಕಳೆದ ಪಂದ್ಯದಲ್ಲಿ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಮುಂಬೈ ವಾಂಖೇಡೆ ಕ್ರೀಡಾಂಗಣದಲ್ಲಿ ಸವಾಲನ್ನು ಎದುರಿಸಲಿದೆ.
ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ಜಯದ ಲಯ ಮುಂದುವರಿಸುವ ಉತ್ಸಾಹದಲ್ಲಿದ್ದರೆ, ಎದುರಿಸಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ರಾಜಸ್ಥಾನದಿಂದ ಕಠಿಣ ಸವಾಲು ಎದುರಾಗುವ ನಿರೀಕ್ಷೆ ಇದೆ.
ಮೊದಲ ಪಂದ್ಯದಲ್ಲಿ ಬ್ಯಾಟ್ಸ್‌ಮನ್ಗಳು ಅಬ್ಬರಿಸಿದ್ದರೂ, ಬೌಲರ್‌ಗಳ ಕಳಪೆ ಆಟದ ಪರಿಣಾಮ ಪಂದ್ಯ ಸೋತಿದ್ದ ಆರ್‌ಸಿಬಿಯನ್ನು ಕಳೆದ ಪಂದ್ಯದಲ್ಲಿ ಬೌಲರ್‌ಗಳು ಕೈಹಿಡಿದಿದ್ದರು. ಈ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಎರಡೂ ವಿಭಾಗದಲ್ಲಿ ಸುಧಾರಿತ ಪ್ರದರ್ಶನ ನೀಡಿದರೆ ಮಾತ್ರ ಗೆಲುವು ದೊರೆಯಲಿದೆ.
ಐಪಿಎಲ್- 2022 : ಆರ್‌ಸಿಬಿಗೆ ರಾಜಸ್ಥಾನ ರಾಯಲ್ಸ್ ಸವಾಲು


































